ನೆರೆಯ ರಾಜ್ಯಗಳಲ್ಲಿ ಲಾಕ್ಡೌನ್ ಹೇಗಿದೆ, ಜನರಿಗೆ ಹೇಗೆ ನೆರವು ಸಿಗುತ್ತಿದೆ ಎಂಬುದನ್ನು ರಾಜ್ಯ ಸರ್ಕಾರ ಒಂದು ಬಾರಿ ಅವಲೋಕಿಸಬೇಕು. ಜನರನ್ನು ಮನೆಗಳಿಂದ ಹೊರ ಬಾರದಂತೆ ತಡೆಯುವುದಷ್ಟೇ ಈ ಲಾಕ್ಡೌನ್ನ ಉದ್ದೇಶವಾಗಬಾರದು. ಜನರ ಸಹಭಾಗಿತ್ವದೊಂದಿಗೆ ವೈರಾಣುವನ್ನು ನಿಗ್ರಹಿಸುವುದು ಉದ್ದೇಶವಾಗಬೇಕು. ಅದಕ್ಕಾಗಿ ಜನರಿಗೆ ಪರಿಹಾರ ಅಗತ್ಯ. 2/4
ಲಾಕ್ಡೌನ್ ಜನರ ಜೀವ ಉಳಿಸುವ ಕ್ರಮ ಹೌದು. ಆದರೆ, ಈ ಲಾಕ್ಡೌನ್ ಜನರ ಬದುಕನ್ನು ಹೈರಾಣಾಗಿಸುತ್ತಿದೆ ಎಂಬುದೂ ನಮಗೆಲ್ಲರಿಗೂ ಅರಿವಿಗೆ ಬಂದಿರುವ ವಿಚಾರ. ಹೀಗಾಗಿಯೇ ನಾವು ಸೂಚಿಸುತ್ತಿರುವ ಜನಹಿತದ ಲಾಕ್ಡೌನ್ ಮಾಡುವುದರತ್ತ ಸರ್ಕಾರ ಆದ್ಯತೆ ನೀಡಬೇಕು. ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗುವುದು ಜನಪರ ಸರ್ಕಾರವೊಂದರ ಕರ್ತವ್ಯ. 4/4